Thursday, June 4, 2026
Homeಕರಾವಳಿಭಟ್ಕಳ: ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ: ಓರ್ವ ನಾಪತ್ತೆ

ಭಟ್ಕಳ: ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ: ಓರ್ವ ನಾಪತ್ತೆ

- Advertisement -
- Advertisement -

ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿ ಮುಳುಗಡೆಯಾದ ಘಟನೆ ಜಾಲಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ಇಬ್ಬರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಜಾಲಿ ನಿವಾಸಿ ನಾಗರಾಜ ರಾಮಕೃಷ್ಣ ಮೊಗೇರ ನಾಪತ್ತೆಯಾದವರು. ರವಿಕ್ಟರ್ ರಾಜ ಹಾಗೂ ಪುರುಷೋತ್ತಮ ಮೊಗೇರ ಎಂಬವರನ್ನು ರಕ್ಷಿಸಲಾಗಿದೆ. ಅವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾದ ಮೀನುಗಾರನಿಗಾಗಿ ಹುಡುಕಾಟ ಮುಂದುವರಿದಿದೆ.

- Advertisement -

Latest News

error: Content is protected !!