Wednesday, June 26, 2024
Homeಕರಾವಳಿಉಳ್ಳಾಲ: ಯುವಕನಿಗೆ ಚೂರಿ ಇರಿತ- ಪ್ರಕರಣ ದಾಖಲು

ಉಳ್ಳಾಲ: ಯುವಕನಿಗೆ ಚೂರಿ ಇರಿತ- ಪ್ರಕರಣ ದಾಖಲು

spot_img
- Advertisement -
- Advertisement -

ಉಳ್ಳಾಲ: ಮುಕ್ಕಚ್ಚೇರಿಯ ಮಸೀದಿ ಬಳಿ ನಾಲ್ವರ ತಂಡವೊಂದು ಯುವಕನೋರ್ವನಿಗೆ ಚಾಕುವಿನಿಂದ ಇರಿದ ಘಟನೆ ಏಪ್ರಿಲ್ 12ರ ಮಂಗಳವಾರ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಮಾಸ್ತಿಕಟ್ಟೆ ನಿವಾಸಿ ಅಲ್-ಸಾದೀನ್ (24) ಎಂದು ಗುರುತಿಸಲಾಗಿದೆ.

ನಾಲ್ವರ ತಂಡ ಯುವಕನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾರೆ. ಈತನನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರೆಲ್ಲರೂ ಪರಸ್ಪರ ಸ್ನೇಹಿತರಾಗಿದ್ದರು ಎನ್ನಲಾಗಿದ್ದು ಒಟ್ಟಿಗೆ ಮಾತನಾಡುತ್ತಿದ್ದ ಸಂದರ್ಭ ಯುವತಿಯ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದು ಚೂರಿಯಿಂದ ಇರಿದಿದ್ದಾರೆ. ದಾಳಿಗೊಳಗಾದವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳಿವೆ. ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಗೆ ಸೇರಿದ ಪೊಲೀಸ್ ವಾಹನವನ್ನು ಧ್ವಂಸ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು

ಘಟನೆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿದ್ದು ತನಿಖೆ ಆರಂಭಿಸಿದೆ.

- Advertisement -
spot_img

Latest News

error: Content is protected !!