Wednesday, June 24, 2026
Homeಕರಾವಳಿಉಡುಪಿಉಡುಪಿ: ಮನೆಗಳಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಮುಸುಕುಧಾರಿಗಳ ತಂಡ

ಉಡುಪಿ: ಮನೆಗಳಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಮುಸುಕುಧಾರಿಗಳ ತಂಡ

- Advertisement -
- Advertisement -

ಉಡುಪಿ: ಮುಸುಕುಧಾರಿಗಳ ತಂಡ ಮನೆಗಳಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಿಕಟ್ಟೆ ಸಮೀಪ ನಡೆದಿದೆ.


ಮೂವರು ಮುಸುಕುಧಾರಿಗಳ ತಂಡವು ಕುಕ್ಕಿಕಟ್ಟೆ ಮುಚ್ಚಲಗೋಡು ಸಮೀಪದ ಸುಬ್ರಹ್ಮಣ್ಯ ನಗರದ ವಿಠಲ ಪೂಜಾರಿ ಎಂಬವರ ಮನೆಗೆ ನುಗ್ಗಿದ್ದು, ಅಲ್ಲಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ವಸ್ತುಗಳಿಗಾಗಿ ಹುಡುಕಾಟ ನಡೆಸಿದೆ. ಆದರೆ ಏನು ಸಿಗದ ಹಿನ್ನೆಲೆಯಲ್ಲಿ ಕಳ್ಳರು ಅಲ್ಲಿಂದ ತೆರಳಿದ್ದಾರೆ.

ಮುಂದೆ ಅಲ್ಲೇ ಸಮೀಪದ ಇನ್ನೊಂದು ಮನೆಗೆ ನುಗ್ಗಲು ಯತ್ನಿಸಿದಾಗ ಮನೆಯವರು ಎಚ್ಚರಗೊಂಡು ಲೈಟ್ ಹಾಕಿದ್ದಾರೆ.  ಈ ವೇಳೆ ಕಳ್ಳರ ತಂಡ ಅಲ್ಲಿಂದ ಪರಾರಿಯಾಗಿದೆ. ಪರಿಸರದ ಸಿಸಿಟಿವಿಯೊಂದರಲ್ಲಿ ಕಳ್ಳರು ರಸ್ತೆಯಲ್ಲಿ ಮನೆಗಳನ್ನು ಗುರುತಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಕಂಡು ಬಂದಿವೆ. ಮಾಹಿತಿ ತಿಳಿದು ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!