- Advertisement -
- Advertisement -
ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಮಂಗಳವಾರ (ಆಗಸ್ಟ್ 25) ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಈ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಹರ್ಷದ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಜೀವ ಉಳಿಸಿಕೊಳ್ಳಲು ಸಾಧ್ಯವಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಹರ್ಷದ್ ಅವರು ಕಲ್ಲೇಗ ಸಮೀಪದ ಮುರ ನಿವಾಸಿಯಾದ ರಝಾಕ್ ಸಾಹೇಬ್ ಅವರ ಪುತ್ರರಾಗಿದ್ದು, ನೆಹರುನಗರದ ‘ರೆಕ್ಷಾ ಶಾಪ್’ನಲ್ಲಿ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
- Advertisement -


