Thursday, June 4, 2026
Homeತಾಜಾ ಸುದ್ದಿಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ - ಎಮರ್ಜೆನ್ಸಿ ಘೋಷಿಸಿದ ಕೆಂಪೇಗೌಡ ವಿಮಾನ ನಿಲ್ದಾಣ!…

ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ – ಎಮರ್ಜೆನ್ಸಿ ಘೋಷಿಸಿದ ಕೆಂಪೇಗೌಡ ವಿಮಾನ ನಿಲ್ದಾಣ!…

- Advertisement -
- Advertisement -

ಬೆಂಗಳೂರು:ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದ ಮುಂದಿನ ವ್ಹೀಲ್ ಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಟೇಕಾಫ್ ವೇಳೆ ಬಹುದೊಡ್ಡ ಸಮಸ್ಯೆ ಎದುರಾಯಿತು. ಈ ಹಿನ್ನೆಲೆಯಲ್ಲಿ ಮಾನ ನಿಲ್ದಾಣದ ಅಧಿಕಾರಿಗಳು ತಕ್ಷಣ ಎಮರ್ಜೆನ್ಸಿ ಘೋಷಿಸಿದ್ದಾರೆ. ಲುಫ್ತಾನ್ಸಾ ಏರ್ ಲೈನ್ಸ್ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಉಂಟಾಗಿತ್ತು.

ಪೈಲಟ್ ಸಮಯ ಪ್ರಜ್ಞೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ವಿಮಾನ ಹಾರಾಟ ನಡೆಸಿದ್ದಾರೆ. ತರುವಾಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಬಳಿ ಇರುವ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಈ ಮೂಲಕ ಭಾರೀ ಅನಾಹುತ ತಪ್ಪಿದೆ. ಇಂಧನ ಖಾಲಿಯಾದ ಬಳಿಕ ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಲುಫ್ತಾನ್ಸಾ ವಿಮಾನದಲ್ಲಿ ಒಟ್ಟು 78 ಜನ ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!