Tuesday, July 7, 2026
Homeಕರಾವಳಿಮಾಣಿ ರಸ್ತೆಗೆ ಬಿದ್ದ ಬೃಹತ್ ಮರ; ಸಂಚಾರ ಅಸ್ತವ್ಯಸ್ತ

ಮಾಣಿ ರಸ್ತೆಗೆ ಬಿದ್ದ ಬೃಹತ್ ಮರ; ಸಂಚಾರ ಅಸ್ತವ್ಯಸ್ತ

- Advertisement -
- Advertisement -

ವಿಟ್ಲ: ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ–ಮಳೆಗೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಮಾಣಿ–ಮೈಸೂರು ರಸ್ತೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದರಿಂದ ರಸ್ತೆ ಸಂಚಾರ ಕೆಲಕಾಲ ಸಂಪೂರ್ಣ ಸ್ಥಗಿತಗೊಂಡಿತು.

ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು. ಈ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಕೊಡಾಜೆ ಗಡಿ–ಬೊಲ್ಲುಕಲ್ಲು ರಸ್ತೆಯ ಮೂಲಕ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗಿತ್ತು. ತದನಂತರ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮರವನ್ನು ತೆರವುಗೊಳಿಸುವ ಮೂಲಕ ವಾಹನ ಸಂಚಾರವನ್ನು ಮತ್ತೆ ಸುಗಮಗೊಳಿಸಿದರು.

- Advertisement -

Latest News

error: Content is protected !!