Wednesday, June 3, 2026
Homeಅಪರಾಧಲಕ್ಕಿ ಡ್ರಾ ನಂಬಿ ಹಣ ಕಳೆದುಕೊಂಡ ಕೂಲಿ ಕಾರ್ಮಿಕ

ಲಕ್ಕಿ ಡ್ರಾ ನಂಬಿ ಹಣ ಕಳೆದುಕೊಂಡ ಕೂಲಿ ಕಾರ್ಮಿಕ

- Advertisement -
- Advertisement -

ಪುತ್ತೂರು: ಇಲ್ಲಿನ ಪುಣಚದ ಕೂಲಿ ಕಾರ್ಮಿಕರೋರ್ವರು ಲಕ್ಕಿ ಡ್ರಾ ಎಂಬ ಮಾತು ನಂಬಿ ಹಣ ಕಳೆದುಕೊಂಡ ಘಟನೆ ನಡೆದಿದೆ.

ಘಟನೆಯ ವಿವರ: ಲಕ್ಕಿ ಡ್ರಾದಲ್ಲಿ ನಿಮ್ಮ ಮೊಬೈಲ್‌ ನಂಬರ್‌ ಆಯ್ಕೆಯಾಗಿದ್ದು, ನಿಮಗೆ ಮೊಬೈಲ್‌ ಬಹುಮಾನವಿದೆ ಎಂದು ಅಪರಿಚಿತ ವ್ಯಕ್ತಿಯೋರ್ವ ದೂರವಾಣಿ ಕರೆ ಮೂಲಕ ತಿಳಿಸಿ, ವಿಳಾಸ ಕಳುಹಿಸುವಂತೆ ತಿಳಿಸಿದ್ದ. ಇದಕ್ಕೆ ಕೂಲಿ ಕಾರ್ಮಿಕ ನನಗೆ ಮೊಬೈಲ್‌ ಬೇಡ ಎಂದು ಹೇಳಿ ಕರೆ ಕಟ್‌ ಮಾಡಿದ್ದರು. ಇದಾದ ಬಳಿಕ ಮತ್ತೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಕೂಲಿ ಕಾರ್ಮಿಕರನ್ನು ನಂಬಿಸುವಲ್ಲಿ ಯಶಸ್ವಿಯಾಗಿದ್ದ. ಮರುದಿನ ಕರೆ ಮಾಡಿದ ಆತ ನೀವು ಹೇಳಿದ ವಿಳಾಸಕ್ಕೆ ಮೊಬೈಲ್‌ ಕಳುಹಿಸಿದ್ದು, ಅಂಚೆಯಿಂದ ನೀವು ಪಡೆದುಕೊಳ್ಳಬೇಕಾದರೆ 1,600 ರೂ. ಪಾವತಿಸುವಂತೆ ಆತ ಹೇಳಿದ್ದ. ಅದರಂತೆ ಹಣ ಪಾವತಿಸಿ ಪಾರ್ಸೆಲ್‌ ಪಡೆದುಕೊಂಡಾಗ ಅದರಲ್ಲಿ ಹಾಳಾದ ಮೊಬೈಲ್‌ವೊಂದರ ಬಿಡಿಭಾಗ ಮಾತ್ರ ಇತ್ತು. ಅನಂತರ ಅವರಿಗೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!