Monday, April 29, 2024
Homeಕರಾವಳಿಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ

spot_img
- Advertisement -
- Advertisement -

ಶಿರ್ವ: ಇಲ್ಲಿನ ಕಲ್ಲೊಟ್ಟು ಬಳಿಯಲ್ಲಿ ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ  ಚಿರತೆಯೊಂದು ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ತಡರಾತ್ರಿ ನಡೆದಿದೆ.

ಗಾಯಗೊಂಡ ವ್ಯಕ್ತಿ ನದಿಯಲ್ಲಿ ಮರಳುಗಾರಿಕೆ ನಡೆಸುವ ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55). ಗಾಯಗೊಂಡ ವ್ಯಕ್ತಿ. ಈತ ಕಲ್ಲೊಟ್ಟು ಸಂತೋಷ್‌ ಪೂಜಾರಿ ಅವರ ಮನೆಯ ವರಾಂಡದಲ್ಲಿ ಮಲಗಿದ್ದು, ಈ ಸಂದರ್ಭದಲ್ಲಿ ಆತನ ಮೇಲೆ ರಾತ್ರಿ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ. ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದ್ದು ರಕ್ತದ ಕೋಡಿ ಹರಿದಿದೆ. ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ. 

ಇನ್ನು ಕಳೆದ ಕೆಲವು ಸಮಯಗಳಿಂದ ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಪದವು ಪರಿಸರದಲ್ಲಿ ಚಿರತೆ ಓಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದೆರಡು ದಿನಗಳಲ್ಲಿ ಕಲ್ಲೊಟ್ಟು ಸಂಗೀತಾ ನಾಯ್ಕ ಅವರ ಮನೆಯ ಎರಡು ಸಾಕು ನಾಯಿಗಳನ್ನು ಚಿರತೆ ಬೇಟೆಯಾಡಿ ನಾಯಿಗಳೆರಡನ್ನೂ ತಿಂದು ಹಾಕಿದೆ.

ಈ ರಸ್ತೆಯಲ್ಲಿ ಪ್ರತೀದಿನ ಶಿರ್ವದ ವಿವಿಧ ಶಾಲಾ ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಹೋಗುವ ವಿದ್ಯಾರ್ಥಿಗಳು, ವಿವಿಧ ಸ್ಥಳಗಳಿಗೆ ಕೆಲಸಕ್ಕೆ ಹೋಗುವ ಪರಿಸರದ ನಾಗರಿಕರು, ವಾಹನ ಸವಾರರು ಭಯಭೀತರಾಗಿದ್ದು, ಗ್ರಾ.ಪಂ. ಆಡಳಿತ ಮತ್ತು ಅರಣ್ಯ ಇಲಾಖೆ ಸಮಸ್ಯೆಗೆ ತುರ್ತು ಪರಿಹಾರ ಒದಗಿಸಬೇಕಾಗಿದೆ.

ಘಟನೆ ನಡೆದ ಕಲ್ಲೊಟ್ಟು ಪರಿಸರದಲ್ಲಿ ಬೋನು ಇಡಲು ಅರಣ್ಯ ರಕ್ಷಕರಿಗೆ ಸೂಚಿಸಲಾಗಿದೆ. ಗಾಯಾಳುವನ್ನು ಭೇಟಿ ಮಾಡಿ, ದಾಳಿ ನಡೆಸಿದ್ದು ಚಿರತೆಯೇ ಆಗಿದ್ದರೆ, ಮಹಜರು ನಡೆಸಿ ಸರಕಾರದಿಂದ ಗರಿಷ್ಠ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಪಡುಬಿದ್ರಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಜೀವನ್‌ ದಾಸ್‌ ಶೆಟ್ಟಿ ಹೇಳಿದರು.

- Advertisement -
spot_img

Latest News

error: Content is protected !!