Wednesday, June 24, 2026
Homeಕರಾವಳಿಸುಣ್ಣಮಜಲಿನಲ್ಲಿ ಲಾರಿ ಪಲ್ಟಿಯಾಗಿ ಸಿಎನ್‌ಜಿ ಸೋರಿಕೆ

ಸುಣ್ಣಮಜಲಿನಲ್ಲಿ ಲಾರಿ ಪಲ್ಟಿಯಾಗಿ ಸಿಎನ್‌ಜಿ ಸೋರಿಕೆ

- Advertisement -
- Advertisement -

ಸುಳ್ಯ: ಮಾಣಿ–ಮೈಸೂರು ರಾಜ್ಯ ಹೆದ್ದಾರಿಯ ಕನಕಮಜಲು ಬಳಿಯ ಸುಣ್ಣಮಜಲು ತಿರುವಿನಲ್ಲಿ ಸಾಂದ್ರೀಕೃತ ನೈಸರ್ಗಿಕ ಅನಿಲ (ಸಿಎನ್‌ಜಿ) ತುಂಬಿದ್ದ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರದಂದು ಸಂಜೆ ನಡೆದಿದೆ.

ಲಾರಿಯಲ್ಲಿದ್ದ ಸಿಲಿಂಡರ್‌ಗಳಿಂದ ಸಿಎನ್‌ಜಿ ಸೋರಿಕೆಯಾಗಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಕೆಲಕಾಲ ಅಸ್ತವ್ಯಸ್ತವಾಯಿತು. ಲಾರಿಯು ಮಡಿಕೇರಿ ಕಡೆಯಿಂದ ಮಂಗಳೂರಿನ ಕಡೆಗೆ ಸಿಎನ್‌ಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿತ್ತು. ಜೋರಾಗಿ ಮಳೆ ಸುರಿಯುತ್ತಿದ್ದುದರಿಂದ ಲಾರಿಯು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿತ್ತು. ಸ್ಥಳಕ್ಕೆ ಧಾವಿಸಿದ ಸುಳ್ಯ ಅಗ್ನಿಶಾಮಕ ದಳದವರು ಹೆಚ್ಚಿನ ಅನಾಹುತ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು.

- Advertisement -

Latest News

error: Content is protected !!