- Advertisement -
![]()
- Advertisement -
ಹೆಬ್ರಿ: ದಿವಾಕರ ( 57 ) ಎಂಬುವವರು ಮಾನಸಿಕ ಖಿನ್ನತೆಗೆ ಒಳಗಾಗಿ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯ ಕುಳ್ಳೂರಿನ ಬಾದ್ಲು ಎಂಬಲ್ಲಿ ನಡೆದಿದೆ.
ಇವರು ವಿಷ ಸೇವಿಸಿ ಅಸ್ವಸ್ಥರಾಗಿದ್ದರು . ತಕ್ಷಣ ಅವರನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿತ್ತು . ಬಳಿಕ ವೈದ್ಯರ ಸಲಹೆಯಂತೆ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು . ಆದರೆ ಇಂದು ಮುಂಜಾನೆ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .
ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -


