Sunday, June 7, 2026
Homeಅಪರಾಧದೇವಸ್ಥಾನದ ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ

ದೇವಸ್ಥಾನದ ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ: ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕೋಟ ಹೀರೆ ಶ್ರೀಮಹಾಲಿಂಗೇಶ್ವರ ದೇವಳದ ಸಮೀಪದ ನಿವಾಸಿ ಜಿ.ಸುರೇಂದ್ರ(70). ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಿ. ಸುರೇಂದ್ರ, ನ.2ರಂದು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಿಮಿತ್ತ ದಾಖಲಾಗಿದ್ದರು. ಆದರೆ ನ.5ರಂದು ಬೆಳಗ್ಗೆ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ. ಸಂಜೆ 5:45ರ ಸುಮಾರಿಗೆ ಕೋಟೇಶ್ವರ ಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದ್ದು, ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

 ಈ ಘಟನೆಯ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

- Advertisement -

Latest News

error: Content is protected !!