Saturday, June 6, 2026
Homeಕರಾವಳಿತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷ ಜಂತು ಕಡಿದು ವ್ಯಕ್ತಿ ಮೃತ್ಯು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷ ಜಂತು ಕಡಿದು ವ್ಯಕ್ತಿ ಮೃತ್ಯು

- Advertisement -
- Advertisement -

ಬಂಟ್ವಾಳ: ಸಜೀಪಮೂಡ ಗ್ರಾಮದ ನಗ್ರಿಯಲ್ಲಿ ವ್ಯಕ್ತಿಯೊಬ್ಬರಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷ ಜಂತು ಕಚ್ಚಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತಪಟ್ಟವರು ನಗ್ರಿ ನಿವಾಸಿ ಅಂದ್ರು ಡಿ’ಸೋಜಾ (60). ಅವರಿಗೆ ಕೆಲಸ ಮಾಡುತ್ತಿದ್ದ ವೇಳೆ ವಿಷ ಜಂತು ಕಚ್ಚಿದ್ದು, ಪ್ರಾರಂಭದಲ್ಲಿ ಹಳ್ಳಿ ಮದ್ದು ಮಾಡಲಾಗಿತ್ತು. ಆದರೆ ದಿನ ಕಳೆದಂತೆ ಅದು ಉಲ್ಬಣಗೊಂಡಿತ್ತು. ಹೀಗಾಗಿ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!