Saturday, June 6, 2026
Homeಕರಾವಳಿಉಡುಪಿಉಡುಪಿ: ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಬಾವಿಗೆ ಬಿದ್ದು ವ್ಯಕ್ತಿ ಸಾವು...!

ಉಡುಪಿ: ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಬಾವಿಗೆ ಬಿದ್ದು ವ್ಯಕ್ತಿ ಸಾವು…!

- Advertisement -
- Advertisement -

ಉಡುಪಿ : ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ನೇಣಿನ ಗಂಟು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಂಜಲ್ತಾರು ಕಡಾರಿ ಎಂಬಲ್ಲಿ ನಡೆದಿದೆ.

ಮೃತರನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕಡಾರಿ ಬಳಿ ನಿವಾಸಿ ಸುಂದರಿ ಎಂಬವರ ಮಗ ಭೋಜ (37) ಎಂದು ಗುರುತಿಸಲಾಗಿದೆ. ಮದ್ಯಪಾನ ಮಾಡುವ ಚಟ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆ ಸಮೀಪದ ಬಾವಿಯ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದರು.

ಈ ವೇಳೆ ನೇಣಿನ ಗಂಟು ಜಾರಿದ ಪರಿಣಾಮ ಅವರು ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!