- Advertisement -
- Advertisement -
ಮಂಗಳೂರು: ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.ನವೀನ್ ಬೆಳ್ಚಾಡ(48) ಮೃತ ವ್ಯಕ್ತಿ.
ನವೀನ್ ಅವರು ಭಾನುವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುತ್ತಿದ್ದರು.ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ.ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- Advertisement -