Saturday, June 13, 2026
Homeಚಿಕ್ಕಮಗಳೂರುಮಳೆ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋದ ಯುವಕ !

ಮಳೆ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಹೋದ ಯುವಕ !

- Advertisement -
- Advertisement -

ಚಿಕ್ಕಮಗಳೂರು: ಸ್ಕೂಟಿಯಲ್ಲಿ ಹೋಗುವಾಗ ಹಳ್ಳದಲ್ಲಿ ವ್ಯಕ್ತಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಈ ಘಟನೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ನಡೆದಿರುವುದು.

ಕೊಚ್ಚಿ ಹೋಗಿ ಸಾವನ್ನಪ್ಪಿದ ವ್ಯಕ್ತಿ ಪೊನ್ನಸ್ವಾಮಿ ಎಂದು ತಿಳಿದುಬಂದಿದೆ. ತಿಮ್ಮಾಪುರದ ಹಳ್ಳದ ಕಿರು ಸೇತುವೆ ಮೇಲೆ ಹೋಗುತ್ತಿದ್ದಾಗ ಕಿರುಸೇತುವೆಯ ಮೇಲೆ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದ ಹಿನ್ನೆಲೆ ಕೊಚ್ಚಿಹೋಗಿದ್ದಾರೆ.

ಕೊಚ್ಚಿಹೋದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮೃತದೇಹ ಹೊರತಗೆದಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!