ಸುಳ್ಯ: ಇಲ್ಲಿನ ಗಾಂಧಿನಗರ ಮುಖ್ಯ ರಸ್ತೆಯಲ್ಲಿ ನಿನ್ನೆ ಚಲಿಸುತ್ತಿರುವ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡಿದ್ದ ಯುವಕ ಮಂಜುನಾಥ್ ಚಿಕಿತ್ಸೆ ಫಲಿಸದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮಂಜುನಾಥ್ ಸುಳ್ಯದಲ್ಲಿ ಕೂಲಿ ಕಾರ್ಮಿಕನಾಗಿದ್ದ.ನಿನ್ನೆ ತೆಂಗಿನಕಾಯಿ ತುಂಬಿಸಿಕೊಂಡು ಮುಖ್ಯ ರಸ್ತೆಯಲ್ಲಿ ಸಾಗಿ ಬರುತ್ತಿದ್ದ ಲಾರಿಯನ್ನು ಗಮನಿಸಿದ ಮಂಜುನಾಥ್ ಲಾರಿ ತನ್ನ ಬಳಿ ಬರುತ್ತಿದ್ದಂತೆ ಹಿಂದಿನ ಚಕ್ರಕ್ಕೆ ಡೈವ್ ಮಾಡಿದ್ದಾನೆ. ಚಕ್ರಕ್ಕೆ ಸಿಲುಕಿದ ಆತನನ್ನು ಲಾರಿ ಸ್ವಲ್ಪ ದೂರ ಎಳೆದೊಯ್ದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ.
ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಆತನನ್ನು ತಕ್ಷಣ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಆತ ಸಾವನ್ನಪ್ಪಿದ್ದಾನೆ. ದೃಶ್ಯ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.