Sunday, October 11, 2026
Homeಕರಾವಳಿಉಡುಪಿಉಡುಪಿ: ಪಾರ್ಕ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ ವ್ಯಕ್ತಿ

ಉಡುಪಿ: ಪಾರ್ಕ್‌ನಲ್ಲಿ ವಿಶ್ರಾಂತಿ ಪಡೆಯುತ್ತಿರುವಾಗಲೇ ಸಾವನ್ನಪ್ಪಿದ ವ್ಯಕ್ತಿ

- Advertisement -
- Advertisement -

ಉಡುಪಿ: ವ್ಯಕ್ತಿಯೊಬ್ಬರು ಪಾರ್ಕ್ ನಲ್ಲಿ ವಿಶ್ರಾಂತಿ ಪಡೆಯುತ್ತಿರುವಾಗಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲಾಸ್ಪತ್ರೆಯ ಮುಂಭಾಗದ ಉದ್ಯಾನವನದಲ್ಲಿ ಸಂಭವಿಸಿದೆ. ಕೊರಂಗ್ರಪಾಡಿಯ ರವಿ ಶೆಟ್ಟಿ (55) ಮೃತರು.

ಇವರು ಜಿಲ್ಲಾಸ್ಪತ್ರೆಯ ಮುಂಭಾಗದ ಉದ್ಯಾನವನದಲ್ಲಿರುವ ಕಲ್ಲುಬೆಂಚಿನ ಮೇಲೆ ಮಲಗಿದ್ದರು. ಮಲಗಿದ್ದ ಸ್ಥಿತಿಯಲ್ಲೇ ಇವರು ಸಾವನ್ನಪ್ಪಿದ್ದಾರೆ. ಮಲಗಿದ್ದಲ್ಲೇ ಇವರಿಗೆ ಹೃದಯಾಘಾತವಾಗಿರುವ ಸಾಧ್ಯತೆ ಇದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಮೃತರ ಶವವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡುವ ವ್ಯವಸ್ಥೆ ಮಾಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!