Saturday, June 29, 2024
Homeಕರಾವಳಿಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯತ್ ನಿಂದ 3 ಸಾವಿರ ರೂಪಾಯಿ...

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯತ್ ನಿಂದ 3 ಸಾವಿರ ರೂಪಾಯಿ ದಂಡ…!

spot_img
- Advertisement -
- Advertisement -

ಬಂಟ್ವಾಳ: ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯತ್ ನಿಂದ 3 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಇತ್ತೀಚಿಗೆ ವ್ಯಕ್ತಿಯೊಬ್ಬರು ಮಾರುತಿ ಓಮ್ಮಿ ಕಾರಿನಲ್ಲಿ ತ್ಯಾಜ್ಯ ತಂದು ಪುದು ಗ್ರಾಮದ ಹತ್ತನೇ ಮೈಲುಕಲು ಎಂಬಲ್ಲಿ ಕಸ ಎಸೆಯುವುದನ್ನು ಗಮನಿಸಿದ ಸ್ಥಳೀಯರು ಕಾರಿನ ನಂಬರ್ ತೆಗೆದು ಪಂಚಾಯತ್ ಅಧ್ಯಕ್ಷರಿಗೆ ನೀಡಿದ್ದರು.

ಕಾರಿನ ನಂಬರ್ ಅನ್ನು ಬಂಟ್ವಾಳ ಪೊಲೀಸ್ ಠಾಣೆಗೆ ನೀಡಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದರು. ಅದರಂತೆ ಪೊಲೀಸರು ಕಾರಿನ ನಂಬರ್ ಆಧಾರದಲ್ಲಿ ವ್ಯಕ್ತಿಯ ವಿಳಾಸ ಪತ್ತೆ ಹಚ್ಚಿ ಠಾಣೆಗೆ ಕರೆಸಿದ್ದರು. ಬಳಿಕ ಪೊಲೀಸರ ಸೂಚನೆಯಂತೆ ವ್ಯಕ್ತಿ ಪುದು ಗ್ರಾಮ ಪಂಚಾಯತ್ ಗೆ ತೆರಳಿ 3 ಸಾವಿರ ರೂಪಾಯಿ ದಂಡ ಪಾವತಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಗ್ರಾಮದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ಯಾರಿ, ಒಳ ರಸ್ತೆಗಳು ಹಾಗೂ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರನ್ನು ಗುರುತಿಸಿ ಅವರ ವಿವರ ನೀಡುವಂತೆ ಗ್ರಾಮದ ಎಲ್ಲಾ ಅಂಗಡಿಗಳಲ್ಲಿ ಹಾಗೂ ಸ್ಥಳೀಯರಲ್ಲಿ ಮನವಿ ಮಾಡಲಾಗಿತ್ತು. ಅದರಂತೆ ರಸ್ತೆ ಬದಿ ತ್ಯಾಜ್ಯ ಎಸೆದ ಓಮ್ನಿ ಕಾರಿನ ನಂಬರ್ ಅನ್ನು ಸ್ಥಳೀಯರೊಬ್ಬರು ನೀಡಿದರು. ಅದರಂತೆ ಕಾರಿನ ಮಾಲಕನನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗಿದೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!