- Advertisement -
![]()
- Advertisement -
ಸುಳ್ಯ; ವ್ಯಕ್ತಿಯೊಬ್ಬ ಮಲಗಿದ್ದ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ನಡೆದಿದೆ. ಜಯಭಾರತಿ (56) ಗಾಯಗೊಂಡ ಮಹಿಳೆ.
ಜಯಭಾರತಿ ಅವರು ರಾತ್ರಿ ಮಲಗಿದ್ದಾಗ ಅವರ ಭಾವ ಶಂಕರ್ ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ, ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
- Advertisement -


