- Advertisement -
![]()
- Advertisement -
ಬಂಟ್ವಾಳ: ವ್ಯಕ್ತಿಯೋರ್ವ ರಾತ್ರಿ ವೇಳೆ ರಸ್ತೆಯ ಮಧ್ಯೆ ಮಲಗಿದ್ದ ವೇಳೆಯಲ್ಲಿ ದ್ವಿಚಕ್ರ ವಾಹನವೊಂದು ಹರಿದು ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದೆ.
ಮೃತರನ್ನು ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50) ಎಂದು ಗುರುತಿಸಲಾಗಿದೆ.ಮೆಲ್ಕಾರ್ ಸಮೀಪದ ಪೆಟ್ರೋಲ್ ಪಂಪ್ ಸಮೀಪ ನಡೆದುಕೊಂಡು ಬಂದು ನಂತರದಲ್ಲಿ ರಸ್ತೆಯಲ್ಲಿ ಮಲಗುವ ದೃಶ್ಯ ಹಾಗೂ ಕೆಲವೇ ಹೊತ್ತಿನಲ್ಲಿ ದ್ವಿಚಕ್ರ ವಾಹನವೊಂದು ಮಲಗಿದ್ದ ವ್ಯಕ್ತಿಯ ಮೇಲೆ ಹರಿದು ಸವಾರ ಕೂಡ ರಸ್ತೆಗೆ ಎಸೆಯಲ್ಪಡುವ ದೃಶ್ಯ ಸೆರೆಯಾಗಿದೆ.
ಅಪಘಾತ ನಡೆಡ ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಕೃಷ್ಣ ಮೂರ್ತಿ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರನಿಗೆ ಗಾಯವಾಗಿದ್ದು ಆತ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Advertisement -


