Wednesday, June 24, 2026
Homeಕರಾವಳಿಬಂಟ್ವಾಳ; ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು

ಬಂಟ್ವಾಳ; ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು

- Advertisement -
- Advertisement -

ಬಂಟ್ವಾಳ; ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲಾಗಿರುವ ಘಟನೆ ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಬಳಿ ನಿನ್ನೆ ಸಂಜೆ ನಡೆದಿದೆ. ಮೈಕಲ್ (53) ನೀರುಪಾಲಾದ ವ್ಯಕ್ತಿ.

ಮೈಕಲ್ ಅವರು ಸುರತ್ಕಲ್ ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದಿದ್ದರು. ಅಲ್ಲಿಂದ ನಾಲ್ಕು ಮಂದಿ  ನಿನ್ನೆ ಸಂಜೆ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದಿದ್ದರು. ಇಲ್ಲಿ ಮೀನು ಹಿಡಿಯುತ್ತಿರುವಾಗ ಮೈಕಲ್  ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ದಾರೆ.

 ಭಾರೀ ಮಳೆಯಿಂದಾಗಿ ನದಿ ಉಕ್ಕಿ ಹರಿಯುತ್ತಿದ್ದು ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ ನಂತರ ಬಂಟ್ವಾಳ ಅಗ್ನಿಶಾಮಕ ದಳದವರು ಆಗಮಿಸಿ ಹುಡುಕಾಟ ನಡೆಸಿದರೂ ನೀರಿನ‌ ಹರಿವು ಹೆಚ್ಚಾಗಿದ್ದರಿಂದ ಹಾಗೂ ಕತ್ತಲದ್ದರಿಂದ ಕಾರ್ಯಾಚರಣೆಗೆ ತೊಂದರೆಯಾಗಿದ್ದು ಇಂದು ಮತ್ತೆ ಹುಡುಕಾಟ ನಡೆಸಲಾಗುತ್ತಿದೆ .ಸ್ಥಳದಲ್ಲಿ ಉಪ್ಪಿನಂಗಡಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಉಪಸ್ಥಿತರಿದ್ದರು.

- Advertisement -

Latest News

error: Content is protected !!