Saturday, June 6, 2026
Homeಕರಾವಳಿಉಡುಪಿಉಡುಪಿ: ಸೆಕೆಂಡ್ ಫ್ಲೋರ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವು

ಉಡುಪಿ: ಸೆಕೆಂಡ್ ಫ್ಲೋರ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವು

- Advertisement -
- Advertisement -

ಉಡುಪಿ: ಸೆಕೆಂಡ್ ಫ್ಲೋರ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಲುಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಶಿರ್ವದಲ್ಲಿ ನಡೆದಿದೆ. ಮೋಹನ್‌ ಆಚಾರ್ಯ (52) ಮೃತ ದುರ್ದೈವಿ.

ಕಾಪುವಿನ ಬೆಳಪು ಗ್ರಾಮದ ಮೋಹನ್ ಆಚಾರ್ಯ ಅವರು ದಿನಾಂಕ 11/11/2025 ರಂದು ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದು, 11:45 ಗಂಟೆಗೆ ಶಿರ್ವ ಗ್ರಾಮದ ಕೆನರಾ ಬ್ಯಾಂಕ್‌ ನ ಎರಡನೇ ಮಹಡಿಯಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ನೆಲಕ್ಕೆ ಬಿದ್ದವರನ್ನು ಅಲ್ಲಿಯೇ ಇದ್ದ ಜೇರಿ ಮಾರ್ಟೀಸ್ ಎಂಬುವವರು ಮೋಹನ್‌ ಆಚಾರ್ಯ ರವರನ್ನು ಉಪಚರಿಸಿ ಒಂದು ವಾಹನದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು ನಂತರ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಕೆ ಎಂ ಸಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ದಿನಾಂಕ 11/11/2025 ರಂದು ಮಧ್ಯಾಹ್ನ 3:00 ಗಂಟೆಗೆ ಪರೀಕ್ಷಿಸಿ ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ.ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!