Sunday, June 7, 2026
Homeಕರಾವಳಿಬೆಳ್ತಂಗಡಿ : ಪಶು ಆಸ್ಪತ್ರೆ ಶೆಡ್ ನಲ್ಲಿ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಪಶು ಆಸ್ಪತ್ರೆ ಶೆಡ್ ನಲ್ಲಿ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಪಶು ಆಸ್ಪತ್ರೆ  ಶೆಡ್ ನಲ್ಲಿ ಮಲಗಿದ  ರೀತಿಯಲ್ಲಿ  ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.ಮೃತ ವ್ಯಕ್ತಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು (37) ರವಿ ಎಂದು ಗುರುತಿಸಲಾಗಿದೆ.

ಇವರು ಕಳೆದ ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದು ಸಂತೆಕಟ್ಟೆ ಸೇರಿದಂತೆ ಪೇಟೆಯಲ್ಲಿ ರಾತ್ರಿ ಹೊತ್ತು ಮಲಗುತ್ತಿದ್ದರು. ವಿಪರೀತ ಕುಡಿತದ ಚಟ ಹೊಂದಿದ್ದ ಇವರು ಕಳೆದ ರಾತ್ರಿ ಪಶು ಆಸ್ಪತ್ರೆಯ ಪಶು ಅಂಬುಲೆನ್ಸ್ ನಿಲ್ಲಿಸುವ ಶೆಡ್ಡಿನಲ್ಲಿ ಮಲಗಿದಲ್ಲಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರು  ಗಮನಿಸಿ  ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!