Sunday, June 7, 2026
Homeಕರಾವಳಿವಿಟ್ಲದಲ್ಲಿ ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ

ವಿಟ್ಲದಲ್ಲಿ ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಜೋಗಿಮಠ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ಕೈರಂಗಳ ಗ್ರಾಮದ ಮೋಟುಗೋಳಿ ಮುನೀರ್ ಕಾಟೇಜ್ ನ ಅಬ್ದುಲ್ ರಹಿಮಾನ್ ರವರ ಪುತ್ರಿ ಅನಿಶಾ (34 ) ಮೃತ ದುರ್ದೈವಿ.

ಅನಿಶಾ ಮೂರನೇ ಹೆರಿಗೆಯಾದ ಬಳಿಕದ ದಿನಗಳಿಂದ ಮಾನಸಿಕವಾಗಿ ನೊಂದು ವಿಟ್ಲ ಕಸಬ ಗ್ರಾಮದ ಜೋಗಿಮಠದಲ್ಲಿರುವ ಆಕೆಯ ಮನೆಯ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ.ಆಕೆಯ ಸಾವಿನಲ್ಲಿ ಯಾವುದೇ ಸಂಶಯವಿಲ್ಲ ಎಂದು ಮೃತರ ಸಹೋದರ ಮುನೀರ್ ಅಹಮ್ಮದ್ ರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!