- Advertisement -
- Advertisement -
ಕಾಸರಗೋಡು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರದ ನೆಲ್ಲಿಕುಂಜೆಯಲ್ಲಿ ನಡೆದಿದೆ. ಮೃತರನ್ನು ನೆಲ್ಲಿಕುಂಜೆಯ ವಿನೋದ್(32) ಎಂದು ತಿಳಿಸಲಾಗಿದೆ.
ಗುರುವಾರ ಬೆಳಿಗ್ಗೆ ಮನೆಯಿಂದ ನೂರು ಮೀಟರ್ ದೂರದ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಮಾಹಿತಿ ತಿಳಿದ ಕಾಸರಗೋಡು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದರು.
ತೆರುವತ್ ನ ವೆಲ್ಡಿಂಗ್ ಅಂಗಡಿಯಲ್ಲಿ ಕಾರ್ಮಿಕನಾಗಿದ್ದರು. ವಿನೋದ್ ನಾಪತ್ತೆಯಾದ ಬಗ್ಗೆ ಮನೆಯವರು ಕಾಸರಗೋಡು ನಗರ ಪೊಲೀಸರಿಗೆ ದೂರು ನೀಡಿದ್ದರು.
- Advertisement -