Sunday, June 28, 2026
Homeಅಪರಾಧಅನ್ಯಕೋಮಿನ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ; ಮೂವರು ಪೊಲೀಸ್ ವಶಕ್ಕೆ

ಅನ್ಯಕೋಮಿನ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ; ಮೂವರು ಪೊಲೀಸ್ ವಶಕ್ಕೆ

- Advertisement -
- Advertisement -

ಮಂಗಳೂರು: ನೈತಿಕ ಪೊಲೀಸ್ ಗಿರಿ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ದು ಮಾಡುತ್ತಿದ್ದು, ಇದೀಗ ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಪಣಂಬೂರು ಬೀಚ್ ನಲ್ಲಿ ಅನ್ಯಕೋಮಿನ ಯುವಕ ಯುವತಿ ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ಕಿರಿಕ್ ಮಾಡಿದ್ದಾರೆ.

ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿ ಭಾನುವಾರದಂದು ಪಣಂಬೂರು ಬೀಚ್ ಗೆ ಆಗಮಿಸಿದ್ದು, ಈ ವೇಳೆಗೆ ಅಲ್ಲಿಗೆ ಬಂದ ಹಿಂದೂ ಸಂಘಟನಾ ಕಾರ್ಯಕರ್ತರು ಜೋಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರಿಗೆ ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಜೋಡಿ ಹಾಗೂ ಹಿಂದೂ ಕಾರ್ಯಕರ್ತರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಇನ್ನು ಈ ಘಟನೆಯ ಕುರಿತು ಯುವಕ ಮತ್ತು ಯುವತಿಯ ಪೈಕಿ ಓರ್ವರು ಪಣಂಬೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ರಾಮಸೇನೆಯ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

- Advertisement -

Latest News

error: Content is protected !!