Saturday, June 6, 2026
Homeಕರಾವಳಿಕಾಸರಗೋಡು : ಮಗು ಸಮೇತ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ!

ಕಾಸರಗೋಡು : ಮಗು ಸಮೇತ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ!

- Advertisement -
- Advertisement -

ಕಾಸರಗೋಡು: ಮೂರು ತಿಂಗಳ ಮಗು ಸಹಿತ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನೀಲೇಶ್ವರದಲ್ಲಿ ನಡೆದಿದೆ.

ನೀಲೇಶ್ವರ ಕಡಿಂಞಮೂಲೆಯ ರಮ್ಯಾ (31) ಮೃತರು ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ಮಗು ಸಮೇತ ಅವರು ಬಾವಿಗೆ ಹಾರಿದ್ದರು ಎಂದು ತಿಳಿದುಬಂದಿದ್ದು, ಮನೆಯವರು ಹಾಗು ಸ್ಥಳೀಯರು ಅವರನ್ನು ಬಾವಿಯಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ ಇಬ್ಬರು ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಾನಸಿಕ ಖಿನ್ನತೆ ಕೃತ್ಯಕ್ಕೆ ಕಾರಣ ಎಂದು ಹೇಳಲಾಗುತ್ತಿದೆ ಹಾಗೂ ಈ ಬಗ್ಗೆ ನೀಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!