- Advertisement -
![]()
- Advertisement -
ಉಳ್ಳಾಲ: ರಸ್ತೆ ಬದಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಅಂಬಿಕಾರೋಡಿನ ಗೇರು ಅಭಿವೃದ್ಧಿ ಕೇಂದ್ರದ ಬಳಿ ನಡೆದಿದೆ.
ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಅವರ ಮನೆಯ ಸಮೀಪ ಕಾರಿನ ಕೆಳಗಡೆ ಬಿಳಿ ಬಟ್ಟೆಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಗು ಪತ್ತೆಯಾಗಿದೆ.
ಈ ಬಗ್ಗೆ ಅಮರ್ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಸದ್ಯ ಮಗುವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
- Advertisement -


