Saturday, June 6, 2026
Homeಕರಾವಳಿಉಡುಪಿಕುಂದಾಪುರ: ಬಸ್ ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಸಮಯಪ್ರಜ್ಞೆ ಮೆರೆದು ಜೀವ ಉಳಿಸಿದ ಚಾಲಕ, ನಿರ್ವಾಹಕ

ಕುಂದಾಪುರ: ಬಸ್ ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಸಮಯಪ್ರಜ್ಞೆ ಮೆರೆದು ಜೀವ ಉಳಿಸಿದ ಚಾಲಕ, ನಿರ್ವಾಹಕ

- Advertisement -
- Advertisement -

ಕುಂದಾಪುರ: ಬಸ್ ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತವಾಗಿ, ಚಾಲಕ ಹಾಗೂ ನಿರ್ವಾಹಕನ ಸಮಯಪ್ರಜ್ಞೆಯಿಂದ ಜೀವ ಉಳಿದ ಘಟನೆ ಕುಂದಾಪುರದಲ್ಲಿ ನಡೆದಿದೆ.

ಕುಂದಾಪುರದ  ಹೊಸ ಬಸ್ ನಿಲ್ದಾಣದಿಂದ ಉಡುಪಿ ಕಡೆಗೆ ಹೊರಟಿದ್ದ ಸಮತಾ ಬಸ್ಸಿನಲ್ಲಿ ಕುಳಿತಿದ್ದ ಕೋಟ ನಿವಾಸಿ ವೆಂಕಟ್ ಎಂಬವರಿಗೆ ಮುಖ್ಯ ರಸ್ತೆಯ ಶಾಲೆಯೊಂದರ ಎದುರು ತೀವ್ರ ಹೃದಯಾಘಾತವಾಗಿದೆ. ಮಾತನಾಡಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡದೇ ಅಸ್ವಸ್ಥರಾಗಿದ್ದರು. ಇದನ್ನು ಗಮನಿಸಿದ ನಿರ್ವಾಹಕ ತಕ್ಷಣ ಈ ವಿಷಯವನ್ನು ಚಾಲಕ ರಿತೇಶ್ ಗೆ ತಿಳಿಸಿದ್ದು, ಆತ ಬಸ್ಸನ್ನು ನೇರಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲೇ ಇದ್ದ ರಿಕ್ಷಾ ಚಾಲಕರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೈದ್ಯರು ವೆಂಕಟ್ ಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣ ಅಂಬುಲೆನ್ಸ್ ನಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಬಸ್ ನಿರ್ವಾಹಕ ಮತ್ತು ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!