- Advertisement -
- Advertisement -
ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದ ತಿರುವಿನಲ್ಲಿ ಬುಧವಾರ ಸಂಜೆ ಸ್ಕೂಟರ್ ಸ್ಕಿಡ್ ಆಗಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಸಹಸವಾರ ದೀಕ್ಷಿತ್ ಪೂಜಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೋಟೆಬಾಗಿಲಿನ ಬಾಡಿಗೆ ಮನೆಯಲ್ಲಿ ವಾಸವಿರುವ ಚಂದ್ರ ಅವರ ಪುತ್ರ ದೀಕ್ಷಿತ್ ಪೂಜಾರಿ (ಯುವಕ) ಮೃತರು. ಸ್ಕೂಟರ್ ಚಲಾಯಿಸುತ್ತಿದ್ದ ಪ್ರಶ್ವಿತ್ ಹೆಗ್ಡೆ ಅವರು ಸಂಜೆ ಮೃತಪಟ್ಟಿದ್ದು, ದೀಕ್ಷಿತ್ ಅವರು ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಕೋಟೆಬಾಗಿಲಿನಿಂದ ಶಿರ್ತಾಡಿ ಕಡೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದವು. ಇಬ್ಬರೂ ಹೆಲ್ಮೆಟ್ ಧರಿಸದೆ ಪ್ರಯಾಣಿಸುತ್ತಿದ್ದ ಕಾರಣ ಅಪಘಾತದ ವೇಳೆ ತಲೆಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.
- Advertisement -


