- Advertisement -
- Advertisement -
ಬಂಟ್ವಾಳ: ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು
ಸಜಿಪಮುನ್ನೂರು ಗ್ರಾಮದ ಮಡಿವಾಳಪಡು ನಿವಾಸಿ ದೇವಪ್ಪ ಮಡಿವಾಳ (60) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ತಮ್ಮ ಮನೆಯಿಂದ ಹೊರಟ ಅವರು ಪಾಣೆಮಂಗಳೂರಿನ ನಂದಾವರ ಸಂಪರ್ಕದ ಕಿರುಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಗುಳ್ಯ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ದೇವಪ್ಪ ಪ್ರಗತಿಪರ ಕೃಷಿಕರು ಕೂಡ ಆಗಿದ್ದರು . ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬಗ್ಗೆ ತನಿಖೆ ಮುಂದುವರಿದಿದೆ.
- Advertisement -