- Advertisement -
![]()
- Advertisement -
ಕಾರ್ಕಳ: ಮನೆಗೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೈಲೂರು ಸಮೀಪದ ನೀರೆ ಎಂಬಲ್ಲಿ ಇಂದು ಸಂಜೆ 4 ಗಂಟೆಗೆ ನಡೆದಿದೆ.
ಮೃತರನ್ನು ನೀರೆ ರಾಜೀವ ನಗರದ ನಿವಾಸಿ ವಾದಿರಾಜ ಆಚಾರ್ಯ(60) ಎಂದು ಗುರುತಿಸಲಾಗಿದೆ. ಇಂದು ಸಂಜೆ ವಾದಿರಾಜ ಅವರ ಮನೆಗೆ ಸಿಡಿಲು ಬಡಿದಿದ್ದು, ಮನೆಯೊಳಗಿದ್ದ ವಾದಿರಾಜ ಆಚಾರ್ಯ ಅವರು ಸಿಡಿಲಿನ ಹೊಡೆತಕ್ಕೆ ನೆಲಕ್ಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಬೈಲೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು, ಆದರೆ ಅವರು ದಾರಿ ಮಧ್ಯದಲ್ಲೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಪರಿಕರಗಳು ಸುಟ್ಟು ಹೋಗಿದ್ದು, ಮನೆಗೂ ಹಾನಿ ಉಂಟಾಗಿದೆ ಹಾಗು ಸುತ್ತಮುತ್ತಲಿನ ಹಲವು ಮನೆಗಳಿಗೂ ಹಾನಿ ಸಂಭವಿಸಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


