Thursday, June 4, 2026
Homeತಾಜಾ ಸುದ್ದಿಉಪ್ಪಿನಂಗಡಿ: ಶೌಚಾಲಯದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

ಉಪ್ಪಿನಂಗಡಿ: ಶೌಚಾಲಯದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ಶೌಚಾಲಯಕ್ಕೆ ಹೋಗಿದ್ದ ಸಂದರ್ಭ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಬಜತ್ತೂರು ಗ್ರಾಮದ ಬೆದ್ರೋಡಿಯ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೃತ ಯುವಕನನ್ನು ಬಜತ್ತೂರು ಗ್ರಾಮದ ಬೆದ್ರೋಡಿ ದಿ.ಬಾಲಕೃಷ್ಣ ಗೌಡರವರ ಪುತ್ರ ಸುರೇಶ್(26ವ) ಎಂದು ಗುರುತಿಸಲಾಗಿದೆ.

ಸುರೇಶ್ ಡಿ.30ರಂದು ಬೆಳಿಗೆ 5.30ರ ವೇಳೆಗೆ ಶೌಚಾಲಯಕ್ಕೆ ಹೋದವರು ಅಲ್ಲೇ ಕುಸಿದು ಬಿದ್ದಿದ್ದರು. ಬಳಿಕ ಮನೆಯವರು ಶೌಚಾಲಯದ ಬಾಗಿಲು ಮುರಿದು ಒಳಪ್ರವೇಶಿಸಿ ಸುರೇಶ್‌ರವರನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ಕರೆತಂದಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಸುರೇಶ್‌ರವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Latest News

error: Content is protected !!