Sunday, June 29, 2025
Homeತಾಜಾ ಸುದ್ದಿಬೆಳ್ಳಾರೆ: ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಬೆಳ್ಳಾರೆ: ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

spot_img
- Advertisement -
- Advertisement -

ಬೆಳ್ಳಾರೆ: ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳ್ಳಾರೆ ತಾಲೂಕಿನ ಮುಪ್ಪೇರ್ಯ ಗ್ರಾಮದ ಪಾಜಪಳ್ಳ ಎಂಬಲ್ಲಿ ನಡೆದಿದೆ. ಮೃತರನ್ನು ಮಾಧವ ಎಂದು ಗುರುತಿಸಲಾಗಿದೆ.

ಇವರು ಪಾಜಪಳ್ಳ ರಾಜೇಂದ್ರಪ್ರಸಾದ್ ಎಂಬವರ ತೋಟದಲ್ಲಿ ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!