Friday, June 5, 2026
Homeಕರಾವಳಿಉಜಿರೆಗೆ ಹೋಗಿ ಬರುವುದಾಗಿ ಹೇಳಿ ತೆರಳಿದ ಕೇರಳ ಮೂಲದ ವ್ಯಕ್ತಿ ನಾಪತ್ತೆ

ಉಜಿರೆಗೆ ಹೋಗಿ ಬರುವುದಾಗಿ ಹೇಳಿ ತೆರಳಿದ ಕೇರಳ ಮೂಲದ ವ್ಯಕ್ತಿ ನಾಪತ್ತೆ

- Advertisement -
- Advertisement -

ಉಜಿರೆ: ಕೇರಳ ಮೂಲದ ವ್ಯಕ್ತಿಯೊಬ್ಬರು ಉಜಿರೆಗೆ ಹೋಗಿ ಬರುವುದಾಗಿ ಹೇಳಿ ತೆರಳಿದವರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವ ವ್ಯಕ್ತಿಯನ್ನು ವಿನ್ಸನ್ ಎಂದು ಗುರುತಿಸಲಾಗಿದೆ.

ಕಳೆದ ಮೂರು ದಿನಗಳ ಹಿಂದೆ ಕಾಸರಗೋಡಿನಿಂದ ಹೊರಟಿದ್ದು ಇತ್ತ ಉಜಿರೆಗೂ ಬಾರದೆ ನಾಪತ್ತೆಯಾಗಿದ್ದಾರೆ. ಮನೆಯವರು ಇವರು ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಇರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರು ಈ ವ್ಯಕ್ತಿಯನ್ನು ಕಂಡರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸುವಂತೆ ಮನೆಯವರು ಮನವಿ ಮಾಡಿದ್ದಾರೆ.

ಈಗಾಗಲೇ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!