Wednesday, June 24, 2026
Homeಕರಾವಳಿಬೆಳ್ತಂಗಡಿ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನೆರಿಯ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ದೇವಗಿರಿ ನಿವಾಸಿ ಪನಚ್ಚಿಕಲ್ ಜೋಸೆಫ್ ಮೃತ ವ್ಯಕ್ತಿ.

ಆ.31ರಂದು ಜೋಸೆಫ್ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಮನೆಯವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಿಸದೆಸ್ಪಂದಿಸದೆ ಸೆ.4 ರಂದು ಮೃತಪಟ್ಟಿದ್ದಾರೆ.

ಜೋಸೆಫ್ ಪತ್ನಿಯೊಂದಿಗೆ ಸದಾ ಜಗಳವಾಡುತ್ತಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕೆ ಅವರ ಪತ್ನಿ ಮಕ್ಕಳೊಂದಿಗೆ ಮನೆಯಿಂದ ತಾಯಿ ಮನೆಗೆ ಹೋಗಿದ್ದರು ಎನ್ನಲಾಗಿದೆ.ಈ ಹಿನ್ನಲೆ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!