- Advertisement -
![]()
- Advertisement -
ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ನಡೆದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎನ್ನಲಾಗಿದೆ.
ಬಸ್ ಬಿ.ಸಿ.ರೋಡು ನಿಂದ ಮಂಗಳೂರಿಗೆ ತೆರಳುತ್ತಿದ್ದು, ಈ ಘಟನೆಗೆ ಮುಖ್ಯ ಕಾರಣ ಚಾಲಕನ ಅತಿ ವೇಗ ಎನ್ನಲಾಗಿದೆ.
ಕೆಲ ಹೊತ್ತು ಘಟನೆಯಿಂದ ಸಂಚಾರಕ್ಕೆ ತೊಡಕು ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


