Monday, June 8, 2026
Homeತಾಜಾ ಸುದ್ದಿಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

- Advertisement -
- Advertisement -

ಹಾಸನ; ಧರ್ಮಸ್ಥಳಕ್ಕೆ ಮಹಾಶಿವರಾತ್ರಿ ಹಿನ್ನೆಲೆ ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ತಾಲ್ಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಓರ್ವನ ಸ್ಥಿತಿ ಗಂಭೀರವಾಗಿದೆ. ದಿನೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ದಿನೇಶ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದವರಿಗೆ ಖಾಸಗಿ ಬಸ್ ಡಿಕ್ಕಿಯಾಗಿದೆ. ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!