Thursday, June 4, 2026
Homeತಾಜಾ ಸುದ್ದಿಬಾಸ್ಕೆಟ್ ಬಾಲ್ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಖಾಸಗಿ ಕಾಲೇಜು ವಿದ್ಯಾರ್ಥಿನಿ

ಬಾಸ್ಕೆಟ್ ಬಾಲ್ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಖಾಸಗಿ ಕಾಲೇಜು ವಿದ್ಯಾರ್ಥಿನಿ

- Advertisement -
- Advertisement -

ಬೆಂಗಳೂರು: ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಎಸ್‌ಎಫ್‌ಎಸ್ ಶಾಲೆಯ ವಿದ್ಯಾರ್ಥಿನಿ ಬಾಸ್ಕೆಟ್ ಬಾಲ್ ಆಟವಾಡುವಾಗ ದಿಢೀರನೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಬಾಲಕಿಯ ಹೆಸರು ಚಾರ್ವಿ (16). ಮಧ್ಯಾಹ್ನ ಆಟವಾಡುತ್ತಿದ್ದಾಗ ಕುಸಿದು ಬಿದ್ದು ಬಾಲಕಿಗೆ ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!