Wednesday, June 3, 2026
Homeಕರಾವಳಿಬೆಳ್ತಂಗಡಿ: ಮತದಾರರ ಜಾಗೃತಿ ಆಂದೋಲನದ ಪ್ರಯುಕ್ತ ಕಾಲ್ನಡಿಗೆ ಜಾಥಾ

ಬೆಳ್ತಂಗಡಿ: ಮತದಾರರ ಜಾಗೃತಿ ಆಂದೋಲನದ ಪ್ರಯುಕ್ತ ಕಾಲ್ನಡಿಗೆ ಜಾಥಾ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಮತ್ತು ಎಸ್.ಡಿ.ಎಂ. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳ ಸಹಯೋಗದೊಂದಿಗೆ, ಇಂದು ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿತ್ತು.

ಆಂದೋಲನ ಪ್ರಯುಕ್ತ ಉಜಿರೆಯ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಯೋಗೀಶ್ ಹೆಚ್.ಆರ್. ಇವರು ಧ್ವಜಾರೋಹಣ ನೆರವೇರಿಸಿದರು.

ನಂತರ ಧರ್ಮಸ್ಥಳ ಮಂಜುನಾಥೇಶ್ವರ ಪಿ ಯು ಕಾಲೇಜ್ ವರೆಗೆ ಕಾಲ್ನಡಿಗೆ ಜಾಥಾ ನಡೆಯಿತು.

ಮಾನ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್,  ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಸುರೇಶ್ ಕುಮಾರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ತಾಲೂಕು ಮಟ್ಟದ ಅಧಿಕಾರಿಗಳು, ಸೆಕ್ಟರ್ ಆಫೀಸರ್, ತಾಲೂಕು ಪಂಚಾಯತ್ ಸಿಬ್ಬಂದಿಗಳು ಮತ್ತು ಉಜಿರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು, ಬೂತ್ ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!