ಚೆನ್ನೈ; ಖ್ಯಾತ ಸಂಗೀತ ನಿರ್ದೇಶಕ ಆಸ್ಕರ್ ಪ್ರಶಸ್ತಿ ವಿಜೇತ ಎ ಆರ್ ರೆಹಮಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಎ ಆರ್ ರೆಹಮಾನ್ ಅವರಿಗೆ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.


ಎ ಆರ್ ರೆಹಮಾನ್ ಅವರಿಗೆ ಇಸಿಜಿ ಸೇರಿದಂತೆ ಹಲವು ಬೇರೆ ಬೇರೆ ಪರೀಕ್ಷೆಗಳನ್ನು ಮಾಡಿಸಲಾಗಿದೆ. ಅವರು ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಅವರ ಮಗಳು ಹಾಗೂ ಮಗ ಸೋಷಿಯಲ್ ಮೀಡಿಯಾ ಮೂಲಕ ಅಪ್ಡೇಟ್ ನೀಡಿದ್ದಾರೆ.