Sunday, February 16, 2025
Homeಕರಾವಳಿಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

spot_img
- Advertisement -
- Advertisement -

ಬೆಳ್ತಂಗಡಿ; ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಕೆ ಪೀ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರ ನಿವಾಸದಲ್ಲಿ ಬೇಟಿ ಮಾಡಿ  ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರು ಈ ಬಗ್ಗೆ ಕಾನೂನು ಸಚಿವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ಕೆ. ಪೀ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ  ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬೀ ಕೆ, ಕೋಶಾಧಿಕಾರಿ ಪ್ರಶಾಂತ್ ಎಂ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೊ, ಕೆ ಡಿ ಪೀ ಸದಸ್ಯರಾದ ಸಂತೋಷ್ ಕುಮಾರ್, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೊಸರ್, ಮಾಜಿ ಅಧ್ಯಕ್ಷರಾದ ಶಿವಕುಮಾರ್ ಎಸ್.ಎಂ, ಹಿರಿಯ ವಕೀಲರಾದ ಭಗೀರಥ, ಜಿ, ಬೀ ಕೆ ಧನಂಜಯ ರಾವ್ ಮತ್ತು ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!