- Advertisement -
- Advertisement -
ಉಡುಪಿ: ಜಿಲ್ಲೆಗೊಂದು ಸುಸಜ್ಜಿತವಾದ ಮೆಡಿಕಲ್ ಕಾಲೇಜು ಬೇಕಾಗಿದ್ದು ಕೂಡಲೇ ಮಂಜೂರು ಮಾಡುವಂತೆ ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮನವಿ ಪತ್ರ ಸಲ್ಲಿಸಿದರು.
ಸಂಸದ ಕೋಟ ಅವರು ಡಿ.13 ಶುಕ್ರವಾರದಂದು ಕೇಂದ್ರ ಸಚಿವರನ್ನು ಭೇಟಿಯಾಗಿದ್ದು, ಉಡುಪಿಯು 15 ಲಕ್ಷ ಜನ ಸಂಖ್ಯೆ ಹೊಂದಿರುವ ವಿಶಾಲ ಪ್ರದೇಶವಾಗಿದ್ದು, ಪ್ರವಾಸಿ ತಾಣ, ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಹೆಸರುವಾಸಿಯಾಗಿದ್ದು, ಇದೀಗ ಜಿಲ್ಲೆಗೆ ಮೆಡಿಕಲ್ ಕಾಲೇಜಿನ ಅಗತ್ಯವಿದ್ದು, ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯವಿದೆ, ಎಂದರು.
ಇದಕ್ಕೆ ಸ್ಪಂದಿಸಿದ ಸಚಿವ ಜೆಪಿ ನಡ್ಡಾ ಅವರು ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ಮಂಜೂರು ಮಾಡುವುದರ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದರು.
- Advertisement -