Thursday, June 4, 2026
Homeತಾಜಾ ಸುದ್ದಿಕಡಬ: ಧ್ವಜಾರೋಹಣದ ವೇಳೆ ಕುಸಿದುಬಿದ್ದ ನಿವೃತ್ತ ಸೈನಿಕ: ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವು

ಕಡಬ: ಧ್ವಜಾರೋಹಣದ ವೇಳೆ ಕುಸಿದುಬಿದ್ದ ನಿವೃತ್ತ ಸೈನಿಕ: ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವು

- Advertisement -
- Advertisement -

ಕಡಬ: ಧ್ವಜಾರೋಹಣದ ವೇಳೆ ಕುಸಿದುಬಿದ್ದ ನಿವೃತ್ತ ಸೈನಿಕರೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ ಘಟನೆ ಕಡಬದ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್‌ ಅಮೃತ ಸರೋವರದ ಬಳಿ ನಡೆದಿದೆ.

ನಿವೃತ್ತ ಸೈನಿಕ ಗಂಗಾಧರ ಗೌಡ ಮೃತಪಟ್ಟವರು. ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್.ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ಧವಾಗುತ್ತಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧೆಯೇ ಮೃತಪಟ್ಟಿದ್ದಾರೆ.  

- Advertisement -

Latest News

error: Content is protected !!