Monday, June 8, 2026
Homeಚಿಕ್ಕಮಗಳೂರುಕೊಪ್ಪದಲ್ಲಿ ಬೈಕ್ ಹಾಗೂ ಕಾರಿನ ಮಧ್ಯೆ ಭೀಕರ ರಸ್ತೆ ಅಪಘಾತ; ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ...

ಕೊಪ್ಪದಲ್ಲಿ ಬೈಕ್ ಹಾಗೂ ಕಾರಿನ ಮಧ್ಯೆ ಭೀಕರ ರಸ್ತೆ ಅಪಘಾತ; ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು

- Advertisement -
- Advertisement -

ಕೊಪ್ಪ :  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಗಡಿಭಾಗವಾದ ಗಡಿಕಲ್ ಸಮೀಪದ ಅಗಳಗಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಗ್ಗಾರುಕೊಡಿಗೆ ಸಮೀಪ ಬೈಕ್ ಹಾಗೂ ಕಾರಿನ ನಡುವೆ ರಸ್ತೆ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬೈಕಿನಲ್ಲಿದ್ದ ಮಹಿಳೆಗೆ ಗಂಭೀರವಾಗಿ ಗಾಯಗಳಾಗಿತ್ತು. ಕೂಡಲೇ ಅವರನ್ನು ಶೃಂಗೇರಿಯ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಬೈಕ್ ಕಳಸ ಮೂಲದ ಪ್ರಶಾಂತ್ ಎಂಬುವವರಿಗೆ ಸೇರಿದ್ದಾಗಿದೆ. ಘಟನೆಯು ಜಯಪುರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಈ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ

- Advertisement -

Latest News

error: Content is protected !!