Tuesday, June 23, 2026
Homeಕರಾವಳಿಮಂಗಳೂರುಮೂಡಬಿದಿರೆ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತ:ಗಂಭೀರವಾಗಿ ಗಾಯಗೊಂಡಿದ್ದ ಪಿಯು ವಿದ್ಯಾರ್ಥಿ...

ಮೂಡಬಿದಿರೆ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತ:ಗಂಭೀರವಾಗಿ ಗಾಯಗೊಂಡಿದ್ದ ಪಿಯು ವಿದ್ಯಾರ್ಥಿ ಸಾವು

- Advertisement -
- Advertisement -

ಮೂಡಬಿದಿರೆ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಯು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮಾರ್ಪಾಡಿ ಗ್ರಾಮದಲ್ಲಿ ನಡೆದಿದೆ.

ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ– ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದುರ್ದೈವಿ.
ಕಾಮಗಾರಿ ಹಂತದಲ್ಲಿರುವ ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿದ್ದರು ಎನ್ನಲಾಗಿದೆ. ಕಾರ್ಕಳ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಮೊದಲು ಮೂಡಬಿದಿರೆಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆದರೆ ಶ್ರವಣ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!