- Advertisement -
![]()
- Advertisement -
ಕಡಬ: ಅನಾರೋಗ್ಯಕ್ಕೊಳಗಾದ ವೃದ್ಧೆಯನ್ನು ಸಮರ್ಪಕವಾದ ರಸ್ತೆ ಇಲ್ಲದ ಕಾರಣ ಮರದ ಬಡಿಗೆಗೆ ಕಟ್ಟಿ ಎರಡು ಕಿ.ಮೀ. ಹೊತ್ತೊಯ್ದು ಆಸ್ಪತ್ರೆ ಸೇರಿಸಿದ ಘಟನೆ ಸುಳ್ಯದ ಕಡಬದಲ್ಲಿ ನಡೆದಿದೆ.
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯ ಕಲ್ಲುಗುಡ್ಡೆ ಸಮೀಪದ ಬಳ್ಳಕ್ಕ ಎಂಬಲ್ಲಿ ಆ.19ರಂದು ಈ ಘಟನೆ ನಡೆದಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನೂಜಿಬಾಳ್ತಿಲ-ಕೊಣಾಜೆ ಗ್ರಾಮವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು ಈ ಭಾಗದ ಜನರಿಗೆ ಎಂಜಿರ ಹತ್ತಿರದ ಪೇಟೆಯಾಗಿದೆ. ಇತ್ತೀಚೆಗೆ ಸುರಿದ ಮಹಾ ಮಳೆಗೆ ಈ ರಸ್ತೆ ಕೆಸರುಮಯವಾದ ಕಾರಣ ಈ ಭಾಗದ ಜನ ತಮ್ಮ ವಾಹನಗಳನ್ನು ಅರ್ಧ ದಾರಿಯಲ್ಲೇ ನಿಲ್ಲಿಸಿ ಕಿಮೀಗಟ್ಟಲೆ ನಡೆದುಕೊಂಡು ಹೋಗಿ ಮನೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ..
- Advertisement -


