Wednesday, April 16, 2025
Homeಕರಾವಳಿಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

spot_img
- Advertisement -
- Advertisement -

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸುಪ್ರೀತ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಹಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಸುಪ್ರೀತ್ ಅವರು ಮುಂಡೂರು ಗ್ರಾ.ಪಂ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಮತ್ತು ಕುಂಞ ಮೇಸ್ತ್ರಿ ಅವರ ಪುತ್ರ.

ಈ ಕುರಿತು ವಿಷಾದ ವ್ಯಕ್ತಪಡಿಸಿದ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ, ಮೃತ ಸುಪ್ರೀತ್ ಅವರು ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ಶಾಲೆಯ ಎಲ್ಲ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಿದ್ದ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!