Saturday, May 18, 2024
Homeಕರಾವಳಿಸುಳ್ಯ: ಅಡಕೆ ಹಳದಿ ರೋಗಕ್ಕೆ ಪ್ಯಾಕೆಜ್ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ; ಡಾ.ರಾಜೇಂದ್ರ ಕೆ.ವಿ

ಸುಳ್ಯ: ಅಡಕೆ ಹಳದಿ ರೋಗಕ್ಕೆ ಪ್ಯಾಕೆಜ್ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ; ಡಾ.ರಾಜೇಂದ್ರ ಕೆ.ವಿ

spot_img
- Advertisement -
- Advertisement -

ಸುಳ್ಯ: ರಾಜ್ಯ ಸರಕಾರಕ್ಕೆ ತೋಟಗಾರಿಕಾ ಇಲಾಖೆಯಿಂದ ಕರಾವಳಿ ಹಾಗೂ ಮಲೆನಾಡಿನ ಅಡಕೆ ತೋಟದಲ್ಲಿ ಕಂಡುಬಂದಿರುವ ಹಳದಿ ಎಲೆ ರೋಗಕ್ಕೆ 18 ಕೋಟಿ ರುಪಾಯಿಗಳ ಪ್ಯಾಕೆಜ್ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದರ ಶೀಘ್ರ ಮಂಜೂರಾತಿ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಶನಿವಾರ ಸುಳ್ಯ ತಾಲೂಕಿನ ಅಮರ ಮುಡ್ನೂರು ಹಾಗೂ ಅಮರ ಪಡ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಕೊಡಲು ಕುಕ್ಕುಜಡ್ಕದ ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಮರ ಸಹಕಾರಿ ಸಭಾಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಅಡಕೆ ಬೆಳೆಗಾರರೊಬ್ಬರು ಸಲ್ಲಿಸಿದ ಅಹವಾಲಿಗೆ ಉತ್ತರಿಸಿದರು.

3 ಸಾವಿರ ಎಕರೆಗಳಲ್ಲಿ ಹಳದಿ ಎಲೆ ರೋಗ ಅಧ್ಯಯನ ಹಾಗೂ ಪರ್ಯಾಯ ಬೆಳೆಗಳ ಬಗ್ಗೆ ಪ್ಯಾಕೆಜ್‍ನಲ್ಲಿ ಪ್ರಸ್ತಾಪಿಸಲಾಗಿದ್ದು, ರಾಷ್ಟ್ರೀಯ ತೋಟಗಾರಿಕಾ ಮಿಷನ್‍ನಡಿ ಪರಿಹಾರ ಕ್ರಮಕ್ಕೆ ನಿರ್ಧರಿಸಲಾಗಿದೆ. ರೋಗಬಾಧಿತ ಅಡಕೆ ಮರ ಕಡಿದು, ಬದಲಿ ಬೆಳೆಗಳನ್ನು ಬೆಳೆಸುವುದಕ್ಕೆ ಈ ಪ್ಯಾಕೆಜ್ ನೆರವಾಗಲಿದೆ. ಇದೇ ವೇಳೆ ಅಡಕೆ ತೋಟ ನಾಶವಾದ ಕಾರಣ ಪರಿಹಾರ ನೀಡುವಂತೆಯೂ ಬೆಳೆಗಾರರು ಆಗ್ರಹಿಸಿದ್ದಾರೆ. ಇದನ್ನೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದಿದ್ದಾರೆ.

- Advertisement -
spot_img

Latest News

error: Content is protected !!