Monday, May 6, 2024
Homeಅಪರಾಧಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ; ಡಿಸಿ ಕಚೇರಿ ಆವರಣದಲ್ಲಿ ಘಟನೆ

ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ; ಡಿಸಿ ಕಚೇರಿ ಆವರಣದಲ್ಲಿ ಘಟನೆ

spot_img
- Advertisement -
- Advertisement -

ಮಂಗಳೂರು:  ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಶ್ರೀಧರ್ ಹೆಗಡೆ ಎಂದು ತಿಳಿದು ಬಂದಿದೆ.

ಇವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದಾರೆ., 2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ತಮ್ಮ ವೈಯಕ್ತಿಕ ಕಾರಣಗಳಿಂದ ಇಂದು ಆತ್ಮಹತ್ಯೆಗೆ ಯತ್ನಿಸಿದ ಇವರನ್ನು ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದು ಹೆಚ್ಚಿನ ನಿಗಾವಣಿಗಾಗಿ ಇವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗಿದೆ.

ಇವರ ಪತ್ನಿ ಜಯಂತಿ ಸ್ಟಾಫ್ ನಸ್೯ ಆಗಿ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ.ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ್ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಚಿಕಿತ್ಸೆಗೆ ನೆರವಾಗಿದ್ದಾರೆ.

- Advertisement -
spot_img

Latest News

error: Content is protected !!